ಕೊಡಗು, ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಮಳೆ, ಗಾಳಿ ಮತ್ತಷ್ಟು ತೀವ್ರಗೊಂಡಿದ್ದು, ಕೊಡಗು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಧಾರಾಕಾರ ಮಳೆಯಿಂದಾಗಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಅಯ್ಯಂಗೇರಿ ವ್ಯಾಪ್ತಿಯಲ್ಲಿ ಮಳೆ ಬಿರುಸಾಗಿದ್ದು ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಮಡಿಕೇರಿ ಸಮೀಪ ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯು ಮೂರನೇ ಬಾರಿಗೆ ಕುಸಿದಿದ್ದು, ಹೆದ್ದಾರಿ ಅಪಾಯದ ಸ್ಥಿತಿಗೆ ತಲುಪಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದ್ದು, ಮಕ್ಕಂದೂರು ಹಾಗೂ ಮಂಗಳಾದೇವಿ ನಗರದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
Visit Us at:
►Facebook: https://www.facebook.com/SuvarnaNews
►Twitter: https://twitter.com/SuvarnaNewstv
►Website: http://www.suvarnanews.com
Check out the latest news from Karnataka, India and across the world. Latest Trending news on Sandalwood, Politics, Business, Cricket, Technology, Automobile, Lifestyle & Health and Travel. More on suvarnanews.com
► SUBSCRIBE OUR CHANNEL : https://goo.gl/8eNAWQ